Wednesday, October 23, 2024
Wednesday, October 23, 2024

ಉಚ್ಚಿಲ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ರಾಜ್ಯ ಕಾರ್ಯಕಾರಿಣಿ ಸಭೆ

ಉಚ್ಚಿಲ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ರಾಜ್ಯ ಕಾರ್ಯಕಾರಿಣಿ ಸಭೆ

Date:

ಉಚ್ಚಿಲ, ಆ.29: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲದಲ್ಲಿ ರಾಜ್ಯಾಧ್ಯಕ್ಷರಾದ ಡಾ. ಜಯರಾಮ್ ಜಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಷ್ಟ್ರೀಯ ಅಧ್ಯಕ್ಷರಾದ ಟಿ ಬಿ ಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ಸ್ವಾಗತಿಸಿದರು.

ವೇದಿಕೆಯಲ್ಲಿ ಸಾಸ್ ಉಡುಪಿ ಜಿಲ್ಲಾ ಗೌರವಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಗೌರವ ಸಲಹೆಗಾರರಾದ ಆನಂದ್ ಪಿ ಸುವರ್ಣ, ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಸಾಸ್ ದಕ್ಷಿಣ ಪ್ರಾಂತಿಯ ಕಾರ್ಯದರ್ಶಿ ಕೃಷ್ಣಯ್ಯಜಿ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎನ್ ಎಮ್ ಹೆಗ್ಡೆ, ರಾಜ್ಯ ಉಪಾಧ್ಯಕ್ಷರಾದ ಸಂಪತ್ ಕುಮಾರ್, ಮಹಿಳಾ ಸಾಸ್ ಜಿಲ್ಲಾಧ್ಯಕ್ಷರಾದ ತಾರಾ ಯು ಆಚಾರ್ಯ, ಸಾಸ್ ಕಾಪು ತಾಲೂಕ್ ಅಧ್ಯಕ್ಷರಾದ ರಘುರಾಮ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಗಣೇಶ್ ಪೊದುವಾಲ್ ಉಪಸ್ಥಿತರಿದ್ದರು.

ಸಾಸ್ ಸದಸ್ಯರು ಸೇವಾ ಮನೋಭಾವನೆಯಿಂದ ಬೇರೆ ಬೇರೆ ರಾಜ್ಯದಿಂದ ಬರುವ ಮಾಲಾದಾರಿಗಳಿಗೆ ತಮ್ಮ ತಮ್ಮ ಜಿಲ್ಲೆಗಳಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕೆಲಸ ಮಾಡಬೇಕು. ಸ್ವಚ್ಛ ಶಬರಿಮಲೆ ಕರೆ ನೀಡಿದ ಸಂದರ್ಭದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಗುರುಸ್ವಾಮಿಗಳು ಮತ್ತು ಮಾಲಾಧಾರಿಗಳು ಇರುಮುಡಿಯಲ್ಲಿ ಪ್ಲಾಸ್ಟಿಕ್ ಬಳಸದಂತೆ ಹಾಗೂ ಹಿಂದಿನಿಂದಲೂ ನಡೆದುಕೊಂಡು ಬಂದ ವೃತ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾಸ್ ಸಂಘಟನೆಯಲ್ಲಿ ಸೇರಿಕೊಳ್ಳುವ ಮೂಲಕ ಅಯ್ಯಪ್ಪ ಧರ್ಮ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮತ್ತು ಉಡುಪಿ ಜಿಲ್ಲೆಯಿಂದ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಮತ್ತು ಮಹಿಳಾ ಸಾಸ್ ಪದಾಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಉಪಾಧ್ಯಕ್ಷರಾದ ವಿಜಯ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!