ಕಾರ್ಕಳ, ಆ.30: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ.ಪೂ.ಕಾಲೇಜು ಕೋಟೇಶ್ವರದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ ಸ್ಥಾನವನ್ನು, ನಿಹಾರ್ ಜೆ.ಎಸ್ ಚತುರ್ಥ ಸ್ಥಾನವನ್ನು, ಸಾತ್ವಿಕ್‌ಬಿ. ಆಚಾರ್ಯ೫ನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ದೈ.ಶಿ.ನಿರ್ದೇಶಕಿ ಸೌಜನ್ಯ ಹೆಗ್ಡೆ ಮಾರ್ಗದರ್ಶನ ನೀಡಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಚೆಸ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಚೆಸ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
Date: