Saturday, November 23, 2024
Saturday, November 23, 2024

ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಆದೇಶವನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ

ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಆದೇಶವನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ

Date:

ಉಡುಪಿ, ಆ.30: ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಅಂದೋಲನ ಹಮ್ಮಿಕೊಳ್ಳಲಾಗಿದ್ದು, ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವ ಹೋಟೆಲ್, ಬೇಕರಿ, ದಿನಸಿ ಅಂಗಡಿ, ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ತೊಡಗಿಕೊಂಡಿರುವ ಎಲ್ಲಾ ಉದ್ಯಮಿಗಳು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆ ಅಡಿ ಪರವಾನಿಗೆ ಅಥವಾ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಉದ್ಯಮಿಗಳು ಆಹಾರದ ಸುರಕ್ಷತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು.

ಆಹಾರ ಸುರಕ್ಷತಾ ಕಾಯ್ದೆಯ ಮಾನದಂಡಗಳಿಗೆ ಮೀರಿ ಆಹಾರದಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿರುವುದರಿಂದ ಅದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೊಟ್ಟೆ, ಮೀನು ಮತ್ತು ಮಾಂಸದ ಆಹಾರ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ, ಸುರಕ್ಷಿತವಾಗಿ ಮತ್ತು ಶುಚಿಯಾಗಿ ಗ್ರಾಹಕರಿಗೆ ನೀಡಬೇಕು. ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲದಲ್ಲಿ ಪರೀಕ್ಷಿಸಲು ಕಳುಹಿಸಿಕೊಡಲು ವಿಶೇಷ ಆಂದೋಲನವನ್ನು ಕೈಗೊಂಡಿದ್ದು ಆಹಾರೋದ್ಯಮಿಗಳು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸಹಕರಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!