Friday, July 31, 2026
Friday, July 31, 2026

ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ

ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ

Date:

ಕಾರ್ಕಳ, ಸೆ.1: ಕಾರ್ಕಳ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ಸುನಿಲ್ ಕುಮಾರ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ. ಪ್ರಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕಾದರೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಇದು ನಾವು ಅವರಿಗೆ ನೀಡುವ ಉತ್ತಮ ಉಡುಗೊರೆಯಾಗಿದೆ. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂದರು.

ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎ ಮತ್ತು ಬಿ ಘಟಕದ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ ಹಾಗೂ ಸುಭಾಷ್, ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಆದರ್ಶ ಎಂ ಕೆ., ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳು, ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್, ಬೋಧಕ ಮತ್ತು ಬೋಧಕೇತರ ವೃಂದದವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಜೂರುವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!