Wednesday, July 29, 2026
Wednesday, July 29, 2026

ಕಾನೂನು ಅರಿವು ಕಾರ್ಯಾಗಾರ

ಕಾನೂನು ಅರಿವು ಕಾರ್ಯಾಗಾರ

Date:

ಕುಂದಾಪುರ, ಸೆ.2: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಸೋಮವಾರ ವಿದ್ಯಾರ್ಥಿಗಳಿಗಾಗಿ ‘ಮಕ್ಕಳು ಮತ್ತು ಕಾನೂನಿನ ಅರಿವು’ ಸಂವಾದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ವಕೀಲೆ, ಲೇಖಕಿ, ಅಂಕಣಗಾರ್ತಿ, ಜೀವನ ಕೌಶಲ್ಯ ತರಬೇತುದಾರೆ ಹಾಗೂ ಬೆಂಗಳೂರಿನ ಅಸ್ಥಿತ್ವ ಲೀಗಲ್ ಟ್ರಸ್ಟ್ ನ ಸಂಸ್ಥಾಪಕಿ ಅಂಜಲಿ ರಾಮಣ್ಣ ಆಗಮಿಸಿ, ಮಕ್ಕಳು ಮತ್ತು ಕಾನೂನಿನ ಅರಿವು ವಿಷಯದ ಆಧಾರದ ಮೇಲೆ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿ, ಮಕ್ಕಳ ರಕ್ಷಣೆ, ಮಕ್ಕಳ ಬಗೆಗಿನ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರೂ, ಸಂಸ್ಥೆಯ ಸಂಚಾಲಕರೂ ಬಿ ಎಂ ಸುಕುಮಾರ್ ಶೆಟ್ಟಿ, ಸಿಇಎಸ್ ನ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ವಿಕೆಆರ್ ಆಚಾರ್ಯ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸ್ವಪ್ನ ಸತೀಶ್, ದಿವ್ಯ ಎಚ್ ಹಾಗೂ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!