Friday, November 22, 2024
Friday, November 22, 2024

ಸೆ. 4: ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸೆ. 4: ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

Date:

ಉಡುಪಿ, ಸೆ.2: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ),
ವೃದ್ಧಾಶ್ರಮಗಳು ಉಡುಪಿ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ದೆಗಳು ಸೆಪ್ಟಂಬರ್ 4 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಹಿರಿಯ ನಾಗರಿಕರ ಕ್ರೀಡಾ ಸ್ಪರ್ಧೆಗಳ ವಿವರ: 60 ರಿಂದ 70 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಸ್ಪರ್ಧೆ, 60 ರಿಂದ 69 ವರ್ಷ ಮತ್ತು 70 ವರ್ಷ ಹಾಗೂ ಮೇಲ್ಪಟ್ಟ ವಯೋಮಿತಿಯ ಪುರುಷರು ಮತ್ತು ಮಹಿಳೆಯರಿಗೆ ಬಿರುಸಿನ ನಡಿಗೆ ಸ್ಪರ್ಧೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳು ನಡೆಯಲಿದೆ.

ಹಿರಿಯ ನಾಗರಿಕರ ಸಾಂಸ್ಕೃತಿಕ ಸ್ಪರ್ಧೆಗಳ ವಿವರ: 60 ರಿಂದ 69 ವರ್ಷ ಮತ್ತು 70 ವರ್ಷ ಹಾಗೂ ಮೇಲ್ಪಟ್ಟ ವಯೋಮಿತಿಯ ಪುರುಷರು ಮತ್ತು ಮಹಿಳೆಯರಿಗೆ ಗಾಯನ ಸ್ಪರ್ಧೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆಯಲಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ತಮ್ಮ ವಯಸ್ಸಿನ ದಾಖಲೆಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...
error: Content is protected !!