Wednesday, September 9, 2026
Wednesday, September 9, 2026

ಮನೆಯೇ ಗ್ರಂಥಾಲಯ: ಶತ ಸಂಭ್ರಮ

ಮನೆಯೇ ಗ್ರಂಥಾಲಯ: ಶತ ಸಂಭ್ರಮ

Date:

ಉಡುಪಿ, ಸೆ.2: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಹತ್ವದ ಅಭಿಯಾನ ಮನೆಯೇ_ಗ್ರಂಥಾಲಯ ನೂರು ದಿನಗಳಲ್ಲಿ 100 ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಅಭಿಯಾನವು ‘ ಶತ ಸಂಭ್ರಮ ಕಾಣುತ್ತಿದ್ದು, ಈ ಕಾರ್ಯಕ್ರಮ ಸೆಪ್ಟೆಂಬರ್ 3 ಮಂಗಳವಾರ ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಡಾ. ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಸಂಪನ್ನಗೊಳ್ಳಲಿದೆ. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೆೈ ಅವರು ಗ್ರಂಥಾಲಯಕ್ಕೆ ಕಪಾಟನ್ನು ನೀಡಿ ಉದ್ಘಾಟಿಸಲಿದ್ದಾರೆ.

ಆಸ್ಪತ್ರೆಯ ನಿರ್ದೇಶಕರಾದ ಡಾ. ಪಿ. ವಿ. ಭಂಡಾರಿ ಅವರು ಅಧ್ಯಕ್ಷತೆ ವಹಿಸಲಿದ್ದು. ನಾಡಿನ ಪ್ರಸಿದ್ಧ ಕಥೆಗಾರರು, ವಿಮರ್ಶಕರು ಆದ ಡಾ.ಬಿ.ಜನಾರ್ದನ ಭಟ್ ಪುಸ್ತಕಗಳನ್ನು ನೀಡಿ ಚಾಲನೆ ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾದ ಪೂರ್ಣಿಮಾ, ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಸಹ ಕಾರ್ಯದರ್ಶಿ ಮೋಹನ ಉಡುಪ ಹಂದಾಡಿ ಉಪಸ್ಥಿತರಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!