Tuesday, February 25, 2025
Tuesday, February 25, 2025

ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ

ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ

Date:

ಗಂಗೊಳ್ಳಿ, ಸೆ.5: ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ನೋಡಲು ಅಧಿಕಾರಿ ಡಾ. ಜಯಶಂಕರ ಕಂಗನಾರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿಸಿಎಂಸಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಅಮೋಘ ದೇವಾಡಿಗ ಇವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ ಸಿ ವಹಿಸಿದ್ದರು.

ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲಾ ಶುಭಾಶಂಸನಗೈದರು. ಎನ್ಎಸ್ಎಸ್ ಯೋಜನಾಧಿಕಾರಿ ಸುಗುಣ ಆರ್ ಕೆ, ಎನ್ಎಸ್ಎಸ್ ವಿದ್ಯಾರ್ಥಿ ನಾಯಕ ಪ್ರೀತಮ್ ನಾಯಕ್ ಉಪಸ್ಥಿತರಿದ್ದರು. ಸಹನಾ ಖಾರ್ವಿ ಸ್ವಾಗತಿಸಿ, ಉಪನ್ಯಾಸಕ ವೆಂಕಟೇಶಮೂರ್ತಿ ಎನ್ ಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಕ್ಷಿತ ವರದಿ ವಾಚಿಸಿದರು. ಧನ್ಯ ಯು ಅತಿಥಿಗಳನ್ನು ಪರಿಚಯಿಸಿದರು. ಭಾರತಿ ಖಾರ್ವಿ ನಿರೂಪಿಸಿ ಶ್ರೇಷ್ಠ ಮೇಸ್ತ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!