Thursday, September 19, 2024
Thursday, September 19, 2024

ಶಿಸ್ತುಬದ್ಧ ಶಿಕ್ಷಣ ಸಾಧನೆಗೆ ಮೂಲಮಂತ್ರ: ಆರ್.ಬಿ.ನಾಯಕ್

ಶಿಸ್ತುಬದ್ಧ ಶಿಕ್ಷಣ ಸಾಧನೆಗೆ ಮೂಲಮಂತ್ರ: ಆರ್.ಬಿ.ನಾಯಕ್

Date:

ಮಣಿಪಾಲ, ಸೆ.5: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲೆಯ ನಿವೃತ್ತ ಉಪನಿರ್ದೇಶಕರಾದ ಆರ್.ಬಿ. ನಾಯಕ್ ಇವರು ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದೊಂದಿಗೆ ಮುನ್ನಡೆಯಬೇಕು, ಶಿಸ್ತುಬದ್ಧ ಶಿಕ್ಷಣ ಸಾಧನೆಗೆ ಮೂಲಮಂತ್ರವಾಗಿದ್ದು ಜ್ಞಾನಸುಧಾ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಶುಭ ಹಾರೈಸಿದರು. ನಿವೃತ್ತ ಶಿಕ್ಷಕರಾದ ವಿವೇಕಾನಂದ ಸರಕಾರಿ ಹಿ.ಪ್ರಾ.ಶಾಲೆಯ ಸದಾನಂದ ಕೆ.ಎಸ್., ಸರಕಾರಿ ಹಿ.ಪ್ರಾ.ಶಾಲೆ ರಾಜೀವ ನಗರದ ಕಲ್ಪನ, ಎಮ್.ಜೆ.ಸಿಯ ಗುಲಾಬಿ, ಸರಕಾರಿ ಹಿ.ಪ್ರಾ.ಶಾಲೆ ವಳಕಾಡು ಇಲ್ಲಿಯ ಹರಿಣ ಇವರನ್ನು ಅಜೆಕಾರು ಪದ್ಮಗೋಪಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಅಮೆಚೂರ್ ಅಥ್ಲೆಟಿಕ್ಸ್ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚಿರಾಗ್ ಸಿ ಪೂಜಾರಿ ಹಾಗೂ ಸ್ವಿಮ್ಮಿಂಗ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಿಧಿ ಇವರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಮಣಿಪಾಲ ಟ್ರಸ್ಟ್ನ ಸಂಚಾಲಕರಾದ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶಮಿತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!