Sunday, January 19, 2025
Sunday, January 19, 2025

ಕಾರ್ಕಳ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ

ಕಾರ್ಕಳ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ

Date:

ಗಣಿತನಗರ, ಸೆ.6: ಹಳ್ಳಿಯ ರೈತ ಮನಸ್ಥಿತಿಯ ಶಿಕ್ಷಕ ಪ್ರಜ್ಞೆ ದೂರವಾಗಿ ನಗರಪ್ರಜ್ಞೆಯ ಶಿಕ್ಷಕರ ಧೋರಣೆ ಜಾಸ್ತಿಯಾಗಿ ಮನುಷ್ಯ ಯಂತ್ರಜೀವಿಯಾಗಿ ರೂಪುಗೊಳ್ಳುತ್ತಿದ್ದಾನೆ. ಎಲ್ಲಾ ಶಾಸ್ತ್ರಗಳನ್ನು ಬಲ್ಲವರಾಗಿರುವ ನಾವು ಮನುಷ್ಯತ್ವದ ಶಾಸ್ತ್ರವನ್ನು ಅರಿಯದೆ ಇರುವುದು ದುಃಖಕರ ಎಂದು ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ತಾಲೂಕಿನ ಆಯ್ದ ಐವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಕೊರೋನಾ ಕಾಲಘಟ್ಟದ ನಂತರ ಮೊಬೈಲ್‌ವಾಣಿಗೆ ಮುಗಿಬಿದ್ದ ವಿದ್ಯಾರ್ಥಿಗಳು, ಜಾಲಧ್ಯಾನಿಗಳಾಗಿ ಇಂದು ತರಗತಿಯಲ್ಲಿ ಅಧ್ಯಾಪಕರ ಪಾಠವನ್ನು ಗೊಮ್ಮಟ ಧ್ಯಾನದಿಂದ ಕೇಳದೆ ಏಕಾಗ್ರತೆಯನ್ನು ಮರೆತು ಯಾಂತ್ರಿಕರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಕರಾವಳಿ ಜಿಲ್ಲೆಗೆ ಮಾದರಿ ಜ್ಞಾನಸುಧಾ. ಊರು ಕಟ್ಟಿದ ಶಿಕ್ಷಕರನ್ನು ಗುರುತಿಸಿದ ಸಂಸ್ಥೆಯ ಕಾರ್ಯವು ಶ್ಲಾಘನೀಯ. ಸಾಂಸ್ಕೃತಿಕ ಜೀವಂತಿಕೆ ಜ್ಞಾನಸುಧಾ ಹೊಂದಿರುವುದನ್ನು ಇಲ್ಲಿ ಕಾಣಬಹುದು ಎಂದರು. ಇದೇ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ತಾಲೂಕಿನ ಸ.ಹಿ.ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಸನ್ಮತ್ ಕುಮಾರ್, ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಧರ್ ಎನ್. ಸುವರ್ಣ, ಎಸ್.ವಿ.ಟಿ ಅ.ಹಿ.ಪ್ರಾ.ಶಾಲೆ ಕಾರ್ಕಳದ ಮುಖ್ಯ ಶಿಕ್ಷಕ ಎಂ.ಜಾನಕಿನಾಥ ರಾವ್, ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆ ನಿಟ್ಟೆಯ ನಿವೃತ್ತ ಶಿಕ್ಷಕ ಕೃಷ್ಣ ಆಚಾರ್ಯ, ಸ.ಮಾ.ಹಿ.ಪ್ರಾ.ಶಾಲೆ ಹೆಬ್ರಿಯ ನಿವೃತ್ತ ಮುಖ್ಯೋಪಾಧ್ಯಾಯ ಎಸ್. ಆರ್ ವಿಶ್ವನಾಥ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿದ ನಿವೃತ್ತ ಮುಖ್ಯ ಶಿಕ್ಷಕ ಎಂ.ಜಾನಕಿನಾಥ ರಾವ್ ಮಾತನಾಡಿದರು. ಇತ್ತೀಚೆಗೆ ಜಿಲ್ಲಾಮಟ್ಟದಲ್ಲಿ ನಡೆದ ಈಜು ಹಾಗೂ ಚದುರಂಗ ಸ್ಪರ್ಧೆಯಲ್ಲಿ ವಿಜೇತರಾದ ಆರು ಮಕ್ಕಳನ್ನು ಗುರುತಿಸಲಾಯಿತು. ನಿವೃತ್ತ ಶಿಕ್ಷಕಿ ಸುಮಿತ್ರಾ ಜೈನ್ ಕವನ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ವಹಿಸಿದ್ದರು. ಅನಿಲ್ ಕುಮಾರ್ ಜೈನ್, ಉಪಪ್ರಾಂಶುಪಾಲ ಸಾಹಿತ್ಯ, ಉಷಾ ರಾವ್ ಯು., ಹಾಗೂ ವಾಣಿ ಕೆ ಉಪಸ್ಥಿತರಿದ್ದರು. ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!