Monday, October 19, 2026
Monday, October 19, 2026

ಮೇಟಿ ಮುದಿಯಪ್ಪ ಅವರಿಗೆ ನುಡಿನಮನ

ಮೇಟಿ ಮುದಿಯಪ್ಪ ಅವರಿಗೆ ನುಡಿನಮನ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಗಳ ವತಿಯಿಂದ ಪ್ರೊ ಮೇಟಿ ಮುದಿಯಪ್ಪ ಅವರಿಗೆ ನುಡಿನಮನ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್.ಪಿ ಅವರು ಮಾತನಾಡುತ್ತಾ, ಮೇಟಿ ಅವರು ಸಂಘಟಕ, ಕಲಾವಿದ, ಸಾಹಿತಿ ಹೀಗೆ ಹಲವು ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು ಸಮಾಜದಲ್ಲಿ ಜನಾನುರಾಗಿಯಾಗಿದ್ದರು. ಅವರ ಅಗಲುವಿಕೆ ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಹಿಳಾ ಪ್ರತಿನಿಧಿ ಪೂರ್ಣಿಮ ಜನಾರ್ಧನ್, ಜಯರಾಮ ಆಚಾರ್ಯ, ಹಫೀಜ್ ರೆಹಮಾನ್, ರಾಘವೇಂದ್ರ ಪ್ರಭು ಕರ್ವಾಲು, ನರಸಿಂಹಮೂರ್ತಿ, ಸುಭೋದ್, ಸುಶಾಂತ್ ಕೆರೆಮಠ, ರೂಪಶ್ರೀ, ಸಿ ಎಸ್ ರಾವ್, ಸೋಮನಾಥ್ ಚಿಟ್ಪಾಡಿ, ವೀರಣ್ಣ ಕುರುವತ್ತಿ ಗೌಡ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಕೋಶಾಧ್ಯಕ್ಷರಾದ ರಾಜೇಶ್ ಭಟ್ ಪಣಿಯಾಡಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!