ಉಡುಪಿ, ಸೆ.10: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ/ ನವೀಕರಣ), ವಿದೇಶಿ ವ್ಯಾಸಾಂಗ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ, ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರ ಪ್ರಕಟಣೆ ತಿಳಿಸಿದೆ.
ಸ್ವ ಉದ್ಯೋಗಕ್ಕೆ ಸಾಲ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸ್ವ ಉದ್ಯೋಗಕ್ಕೆ ಸಾಲ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Date: