ಉಡುಪಿ, ಸೆ.9: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.