ಉಡುಪಿ, ಸೆ.10: ಕಾರ್ಕಳ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕಾರ, ಸಂಸ್ಕೃತಿಯ ತಳಹದಿಯ ಮೇಲೆ ಭಾರತೀಯ ಚಿಂತನೆವುಳ್ಳ ಶಿಕ್ಷಣವನ್ನು ನೀಡುತ್ತಿರುವ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಭಾಗದ ಕನ್ನಡ ಭಾಷಾ ಶಿಕ್ಷಕ ಮಹೇಶ್ ಹೈಕಾಡಿಯವರಿಗೆ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಆಸ್ಪತ್ರೆ ಉಡುಪಿ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ಜಯಂತಿ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಂದು ಇವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ 2024 ನೀಡಿ ಗೌರವಿಸಲಾಯಿತು.
ಮಹೇಶ ಹೈಕಾಡಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

ಮಹೇಶ ಹೈಕಾಡಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ
Date: