ಉಡುಪಿ: ಉಡುಪಿ ತಾಲೂಕು ತೋನ್ಸೆ ಗ್ರಾಮ ಪಂಚಾಯತ್ನ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಲುವಾಗಿ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ರಮೇಶ್ ಎನ್ ಮೊ.ನಂ: 9449498783 ಹಾಗೂ ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮ ಪಂಚಾಯತ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಮೊ.ನಂ: 9448409855 ಇವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.
ನೇಮಕ ಮಾಡಲಾದ ಅಧಿಕಾರಿಗಳು ವಹಿಸಲಾಗಿರುವ ಗ್ರಾಮ ಪಂಚಾಯತ್ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕವನ್ನು ನಿಗದಿಪಡಿಸಿ, ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಛೇರಿಗೆ ಪ್ರಕಟಣೆ ತಿಳಿಸಿದೆ.