ಕಾಪು, ಸೆ.10: ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ಹಾಗೂ ಪುರಸಭೆ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಮಂಗಳವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಸಂಚಾಲಕರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ ನಡೆಸಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಪುರಸಭೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು: ಬಿಜೆಪಿ ಸದಸ್ಯತ್ವ ನೋಂದಣಿ ಸಭೆ
ಕಾಪು: ಬಿಜೆಪಿ ಸದಸ್ಯತ್ವ ನೋಂದಣಿ ಸಭೆ
Date: