Tuesday, September 8, 2026
Tuesday, September 8, 2026

ತೆಂಕನಿಡಿಯೂರು ಕಾಲೇಜು: ನಶಾ ಮುಕ್ತ ಅಭಿಯಾನ

ತೆಂಕನಿಡಿಯೂರು ಕಾಲೇಜು: ನಶಾ ಮುಕ್ತ ಅಭಿಯಾನ

Date:

ಮಲ್ಪೆ, ಸೆ.11: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಸಮಾಜಕಾರ್ಯ ವೇದಿಕೆ ಮತ್ತು ಎನ್.ಎಸ್.ಎಸ್. ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರಕಾರ ಮತ್ತು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ದೊಡ್ಡಣಗುಡ್ಡೆ ಮನೋ ವೈದ್ಯ ಡಾ. ವಿರೂಪಾಕ್ಷ ದೇವರಮನೆ, ನಶಾ ಮುಕ್ತ ಭಾರತ ಅಭಿಯಾನ ಮತ್ತು ಪ್ರಸ್ತುತ ಉಡುಪಿ ಜಿಲ್ಲೆಯನ್ನು ನಶಾ ಮುಕ್ತ ಮಾಡುವ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಯಗೋಲ, ಅಕ್ಷರ ಯಾಧವ್, ರಾಜ್ಯ ಸಂಯೋಜನಾಧಿಕಾರಿಗಳು ನಶಾ ಮುಕ್ತ ಭಾರತ ಅಭಿಯಾನ, ಶಿವಾಜಿ ಎ.ಕೆ. ಪ್ರೋಜೆಕ್ಟ್
ಸಂಯೋಜನಾಧಿಕಾರಿಗಳು ಮತ್ತು ಮಮತಾ, ಸಮಾಜಕಾರ್ಯ ವಿಭಾಗ ಮುಖ್ಯಸ್ಥರು (ಪದವಿ) ಮತ್ತು ಸುಷ್ಮಾ ಟಿ., ಸಮಾಜಕಾರ್ಯ ವಿಭಾಗ ಮುಖ್ಯಸ್ಥರು (ಸ್ನಾತಕೋತ್ತರ) ಉಪಸ್ಥಿತರಿದ್ದರು. ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟಾ ಮಥಾಯಿಸ್ ಸ್ವಾಗತಿಸಿ, ದ್ವಿತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿ ಓಶಿಯನ್ ಬಾರಾ ವಂದಿಸಿದರು. ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ರಿಯೋನಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!