ಉಡುಪಿ, ಸೆ.12: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಹೆಗ್ಡೆ ಇವರು ಅದ್ವಿತೀಯ ಪ್ರದರ್ಶನವನ್ನು ನೀಡಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂದ್ಯಾ ಕುಮಾರಿ ಶೆಟ್ಟಿಯವರ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯ಼ಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರರು ಅಭಿನಂದಿಸಿರುತ್ತಾರೆ.
ವಾಲಿಬಾಲ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನೈಜ ಹೆಗ್ಡೆ ಜಿಲ್ಲಾಮಟ್ಟಕ್ಕೆ ಆಯ್ಕೆ

ವಾಲಿಬಾಲ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನೈಜ ಹೆಗ್ಡೆ ಜಿಲ್ಲಾಮಟ್ಟಕ್ಕೆ ಆಯ್ಕೆ
Date: