Saturday, September 21, 2024
Saturday, September 21, 2024

ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

Date:

ಉಡುಪಿ, ಸೆ.12: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾತೆರಿಗೆ/ ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ವಾರ್ಷಿಕ ಆದಾಯ ಇರುವ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಪಡೆಯಲು (ಬಿ.ಪಿ.ಎಲ್) ಅರ್ಹರಿರುವುದಿಲ್ಲ.

ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರು ತಕ್ಷಣವೇ ತಾಲೂಕಿನ ತಹಶೀಲ್ದಾರರ ಕಛೇರಿಗೆ ಪಡಿತರ ಚೀಟಿಯನ್ನು ಒಪ್ಪಿಸಿ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಪಡೆಯಬೇಕು. ಜಿಲ್ಲಾ ಮಟ್ಟದಲ್ಲಿ ಅನರ್ಹ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ತಪಾಸಣಾ ತಂಡವನ್ನು ರಚಿಸಲಾಗುತ್ತಿದ್ದು, ತಪಾಸಣಾ ಸಮಯದಲ್ಲಿ ಅನರ್ಹರು ಎಂದು ಕಂಡು ಬಂದಲ್ಲಿ ಅವರು ಪಡೆದಿರುವ ಆಹಾರಧಾನ್ಯಕ್ಕೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಸೂಲಾತಿ ಮಾಡುವುದರೊಂದಿಗೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿ (Prevention of Unauthorised Possesion of Rations Cards) ಆದೇಶ 1977ರಡಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!