Monday, November 11, 2024
Monday, November 11, 2024

ಸೆ. 14: ರಾಷ್ಟ್ರೀಯ ಲೋಕ ಅದಾಲತ್

ಸೆ. 14: ರಾಷ್ಟ್ರೀಯ ಲೋಕ ಅದಾಲತ್

Date:

ಉಡುಪಿ, ಸೆ.12: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚಿಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರ್/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಕುಟುಂಬ ನ್ಯಾಯಾಲಯಗಳ ಪ್ರಕರಣಗಳು (ವಿಚ್ಛೇದನವನ್ನು ಹೊರತುಪಡಿಸಿ), ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್
ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು, ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಹೆಚ್ಚಿನ ವಿವರಗಳಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಠಡಿ ಸಂಖ್ಯೆ: 05, ನೆಲಮಹಡಿ, ನ್ಯಾಯಾಲಯಗಳ ಸಂಕೀರ್ಣ, ಉಡುಪಿ, ಇ-ಮೇಲ್: [email protected] ಅಥವಾ ದೂ.ಸಂಖ್ಯೆ: 0820-2523355, 9141193960 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರದ್ದು ಶ್ರೇಷ್ಠ ವ್ಯಕ್ತಿತ್ವ: ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್

ಕೋಟ, ನ.10: ಕಾರಂತರು ಹುಟ್ಟಿದ ನೆಲದಲ್ಲಿ ಧನ್ಯತೆಯ ಭಾವ ಮೈದುಂಬಿದೆ. ಪ್ರಶಸ್ತಿ...

ಮಣಿಪಾಲ: ‘ಗಿರಿಜಾ ಸರ್ಜಿಕಲ್ಸ್’ ನೂತನ ಶಾಖೆ ಉದ್ಘಾಟನೆ

ಮಣಿಪಾಲ, ನ.10: ಅಂತರಾಷ್ಟ್ರೀಯ ಖ್ಯಾತಿಯ ಮಣಿಪಾಲದಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸರ್ಜಿಕಲ್...

‘ನನ್ನ ನಾಡು ನನ್ನ ಹಾಡು’ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ, ನ.10: ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ...

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ, ನ.10: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ...
error: Content is protected !!