Sunday, February 8, 2026
Sunday, February 8, 2026

ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

Date:

ಕೋಟ, ಸೆ.13: ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹತ್ತೊಂಭತ್ತು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್, ಡಾ.ವಿದ್ಯಾಭೂಷಣ್ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.

ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2024ರ ಸಾಲಿನಲ್ಲಿ ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರನ್ನು ಆಯ್ಕೆ ಮಾಡಲಾಗಿದೆ.ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತು ಚೌಕಟ್ಟು ನೀಡಿದ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪಿ.ಡಿ.ಓ ರವೀಂದ್ರ ರಾವ್ , ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!