Sunday, January 19, 2025
Sunday, January 19, 2025

ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

Date:

ಉಡುಪಿ, ಸೆ.13: ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾರೈಸಿದರು. ಅವರು ಶುಕ್ರವಾರ ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹು ಭಾಷೆ, ಬಹು ಕಲೆ – ಸಂಸ್ಕೃತಿಯ ಈ ಕರಾವಳಿ ಭಾಗದಲ್ಲಿ ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬಹು ಸಂಸ್ಕೃತಿ ಉತ್ಸವಕ್ಕೆ ಪೂರಕವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸ್ಪರ್ಧೆಗಳನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಚಿಕ್ಕನಿಂದಲೇ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುದರ ಮೂಲಕ ನಮ್ಮ ರಾಷ್ಟ್ರೀಯ ಹಬ್ಬಗಳು, ಆಚಾರ- ವಿಚಾರ, ಸಂಸ್ಕೃತಿಯನ್ನು ಮೈಗೊಡಿಸಿಕೊಂಡು ದೇಶದ ಸುಸಂಸ್ಕೃತ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕೆಂದದರು. ಜಿಲ್ಲಾಮಟ್ಟದ ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ 3,000 ರೂ., ದ್ವಿತೀಯ ಬಹುಮಾನ 2,000 ರೂ., ತೃತೀಯ ಬಹುಮಾನ 1,000 ರೂ. ನಗದು ಹಾಗೂ 5 ಸಮಾಧಾನಕರ ಬಹುಮಾನಗಳು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ಮಂಗಳೂರು ವಲಯ ಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫೋರಂ ಇವರಿಂದ ಸ್ಪರ್ಧೆ ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಆರ್ಟಿಸ್ಟ್ ಫೋರಂ ಉಡುಪಿ ಕಾರ್ಯದರ್ಶಿ ಸಕು ಪಾಂಗಾಳ, ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶ್ರೀ ಕೃಷ್ಣಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!