Wednesday, July 29, 2026
Wednesday, July 29, 2026

ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Date:

ಉಡುಪಿ, ಸೆ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.

ಸ್ಪರ್ಧೆಗಳ ವಿವಿರ: ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಸರು ಹಾಗೂ ತಂಡವನ್ನು ನೋಂದಾಯಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ, ರಾಜೀವ್ ಗಾಂಧಿ ಕ್ರೀಡಾಂಗಣ ಹೆಜಮಾಡಿ ಕಾಪು ಮೊ.ನಂ: 9448770165 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!