Saturday, September 21, 2024
Saturday, September 21, 2024

ಸಮಾಜ ಸೇವೆಯ ಆತ್ಮತೃಪ್ತಿ ವಿಶಿಷ್ಟವಾದದ್ದು: ಪ್ರಕಾಶ್ಚಂದ್ರ ಶೆಟ್ಟಿ

ಸಮಾಜ ಸೇವೆಯ ಆತ್ಮತೃಪ್ತಿ ವಿಶಿಷ್ಟವಾದದ್ದು: ಪ್ರಕಾಶ್ಚಂದ್ರ ಶೆಟ್ಟಿ

Date:

ಬ್ರಹ್ಮಾವರ: ನಮ್ಮ ಆದಾಯದ ಒಂದಂಶವನ್ನು ಸಮಾಜಕ್ಕೆ ಕೊಟ್ಟಾಗ ಅದರಿಂದ ಸಿಗುವಂತಹ ಆತ್ಮ ಸಂತೃಪ್ತಿ ವಿಶಿಷ್ಟವಾದುದು ಎಂದು ಜಿ.ಎಂ ವಿದ್ಯಾನಿಕೇತನ ಹಾರಾಡಿ ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಬ್ರಹ್ಮಾವರ ಇದರ ವತಿಯಿಂದ ಬ್ರಹ್ಮಾವರ ಸಿಂಧೂರ ಸಭಾಭವನದಲ್ಲಿ ನಡೆದ ಸಾಧಕರಿಗೆ ಸನ್ಮಾನ ಮತ್ತು ಮಹಾಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಯಂಟ್ಸ್ ಗ್ರೂಪ್ ಸಂಸ್ಥೆಯು ಹಲವಾರು ಜನೋಪಯೋಗಿ ಕಾರ್ಯಕ್ರಮದ ಮೂಲಕ ಇಲ್ಲಿನ ಜನರ ಮನೆಮಾತಾಗಿದೆ ಎಂದು ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ ವಹಿಸಿದ್ದರು. ವೇದಿಕೆಯಲ್ಲಿ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಕಾರ್ಯದರ್ಶಿ ಶ್ರೀನಾಥ್ ಕೋಟ ಉಪಸ್ಥಿತರಿದ್ದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್.ಕಲ್ಮಾಡಿ, ಕ.ಸಾ.ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪೇತ್ರಿಯ ಸಹಾಯಕ ಮಂಜುನಾಥ್ ನಾಯ್ಕ್, ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ ಹೇರೂರು ರವರನ್ನು ಸನ್ಮಾನಿಸಲಾಯಿತು.

ವೈದ್ಯರಾದ ಡಾ. ವಿಶ್ವನಾಥ್ ಪೈ, ಡಾ. ಮಹೇಶ್ ಐತಾಳ, ವೈದ್ಯಕೀಯ ಪ್ರತಿನಿಧಿ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್, ಲೆಕ್ಕಪರಿಶೋಧಕ ರಂಜಿತ್ ರಾಜ್, ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಮುಂತಾದವರಿದ್ದರು. ಅಣ್ಣಯ್ಯದಾಸ್ ವರದಿ ವಾಚಿಸಿದರು. ಮಿಲ್ಟನ್ ಒಲಿವೇರಾ, ರೋನಾಲ್ಡ್, ವಿವೇಕ್ ಕಾಮತ್ ಪರಿಚಯಿಸಿದರು. ಮುಂದಿನ ಸಾಲಿನ ಪದಾಧಿಕಾರಿಗಳ ಘೋಷಣೆ ಮಾಡಲಾಯಿತು. ಸುಂದರ ಪೂಜಾರಿ ಸ್ವಾಗತಿಸಿ, ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!