Sunday, February 23, 2025
Sunday, February 23, 2025

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Date:

ಕಟಪಾಡಿ, ಸೆ.14: ಪಾಜಕ ಆನಂದತೀರ್ಥ ಪ.ಪೂ ಕಾಲೇಜು, ಮತ್ತು ಉಡುಪಿ ಜಿಲ್ಲಾ ಪ.ಪೂ ಶಿಕ್ಷಣ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ದಾನಿ ನಿರಂಜನ್ ಬೆಳ್ಳೆ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ಮನಸ್ಸು ಮತ್ತು ದೇಹವನ್ನು ಸಮತೋಲಿತವಾಗಿಡಲು ಸಹಕಾರಿ, ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಮತ್ತು ನಿರಂತರ ಅಭ್ಯಾಸದಲ್ಲಿ ತೊಡಗಿರುವ ಎಲ್ಲಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಾರೆ. ಇಂತಹ ಕ್ರೀಡಾಕೂಟ ಆಯೋಜನೆಯಿಂದ ಮುಂದೆ ಅಂತರಾಷ್ಟ್ರೀಯ ಕ್ರೀಡಾಪಟು ಉದಯಿಸಲು ಸಾಧ್ಯ ಎಂದರು. ಪ್ರಾಂಶುಪಾಲ ವಿಜಯ್ ಪಿ. ರಾವ್, ದಾನಿ ನಿರಂಜನ್ ಬೆಳ್ಳೆ, ಕಮಲಾಕ್ಷೀ ಪ್ರಕಾಶ್, ತಾಲೂಕು ಕ್ರೀಡಾ ಸಂಯೋಜನಾಧಿಕಾರಿ ಜೋಸೆಫ್ ಡಿಸೋಜ, ಕಾಲೀಜಿನ ದೈಹಿಕ ಶಿಕ್ಷಣ ನಿರ್ದೇಶಕ ವಕ್ಷತ್ ಸಾಲಿಯಾನ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ, ಸಚಿನ್, ಸಂಸ್ಕೃತ ಶಿಕ್ಷಕ ವಿರೇಂದ್ರ ಹೆಗ್ಡೆ, ವಸತಿನಿಲಯದ ಮೇಲ್ವಿಚಾರಕ ಅಮೀಷ್, ವಾಸುದೇವ ಗುರುಕುಲ ಮೇಲ್ವೀಚಾರಕ ಸುಮಂತ್ ಹೆಗ್ಡೆ ಕ್ರೀಡಾಕೂಟಕ್ಕೆ ಸಹಕರಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಆನಂದತೀರ್ಥ ಆಡಳಿತ ಮಂಡಳಿ ಕಾರ್ಯದರ್ಶಿ ಸುಬ್ರಹ್ಮಣ್ಯ ಸಾಮಗ ಭಾಗವಹಿಸಿ, ವಿಜೇತ ತಂಡಗಳಿಗೆ ಪ್ರಶಸ್ತಿ ಫಲಕ ವಿತರಿಸಿ ಶುಭ ಹಾರೈಸಿ, ಕ್ರೀಡಾದಾನಿ ರಾಯಲ್ ಫರ್ನಾಂಡಿಸ್ ಕಟಪಾಡಿ ಇವರನ್ನು ಕಾಲೇಜು ವತಿಯಿಂದ ಗೌರವಿಸಿದರು.

ಫಲಿತಾಂಶ: ಬಾಲಕರ ವಿಭಾಗದಲ್ಲಿ ಹಿಂದೂ ಪ.ಪೂ ಕಾಲೇಜು ಪದವು ಪ್ರಥಮ, ಅದಮಾರು ಪಿ.ಪಿ.ಸಿ ಕಾಲೇಜು ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಸೈಂಟ್ ಜಾನ್ಸ್ ಪ.ಪೂ ಕಾಲೇಜು ಶಂಕರಪುರ ಪ್ರಥಮ, ಆನಂದತೀರ್ಥ ಪ.ಪೂ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!