ಉಡುಪಿ, ಸೆ.14: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವೀರೇಶ್ ಖಾರ್ವಿ ಶಮಿತ್ ಖಾರ್ವಿ, ಶರಣ್ ಎಸ್ ಪೂಜಾರಿ, ಯುವರಾಜ್ ಖಾರ್ವಿ, ಪ್ರೀತೇಶ್ ಖಾರ್ವಿ, ಕಾರ್ತಿಕ್ ಖಾರ್ವಿ, ತರುಣ್ ಖಾರ್ವಿ, ಧನುಷ್ ಖಾರ್ವಿ, ನಿತಿನ್ ರೆಬೆರೋ, ಮತ್ತು ವಿಶ್ವಾಸ್ ತಂಡವನ್ನು ಪ್ರತಿನಿಧಿಸಿದ್ದರು. ಶಮಿತ್ ಖಾರ್ವಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ತರಬೇತಿ ನೀಡಿದ್ದರು. ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದೆ.
ತ್ರೋಬಾಲ್: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ

ತ್ರೋಬಾಲ್: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ
Date: