Sunday, January 19, 2025
Sunday, January 19, 2025

ವಿಶ್ವಕರ್ಮ ಯಜ್ಞ

ವಿಶ್ವಕರ್ಮ ಯಜ್ಞ

Date:

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು. ಪೂರ್ವಾಹ್ನ ಲಕ್ಷ್ಮಿಕಾಂತ್ ಶರ್ಮ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಪೂಜಾ ಕಾರ್ಯದಲ್ಲಿ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಎಂ.ಸುಬ್ರಾಯ ಆಚಾರ್ ದಂಪತಿಗಳು ಭಾಗಿಯಾದರು.

ಪೂಜಾ ವಿಧಿವಿಧಾನ ಕಾರ್ಯದಲ್ಲಿ ಕೋಟದ ಶ್ರೀ ಗುರುಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ಆಚಾರ್ ಭಾಗಿಯಾದರು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, ಕಲಾ ವೇದಿಕೆ ತಂಡದಿಂದ ನೃತ್ಯ ಗಾನ ವೈಭವ ,ಸುವಿನ್ಯ ಆಚಾರ್ ಮಂಗಳೂರು ತಂಡದಿಂದ ಸಂಗೀತ ಕಾರ್ಯಕ್ರಮಗಳು ಜರಗಿದವು. ಶ್ರೀ ವಿರಾಡ್ವಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಕಾರ್ಯದರ್ಶಿ ಕೇಶವ ಆಚಾರ್, ಕೋಶಾಧಿಕಾರಿ ರಮೇಶ್ ಆಚಾರ್ ಚೇಂಪಿ, ವಿಶ್ಚಕರ್ಮ ಕಲಾವೃಂದದ ಅಧ್ಯಕ್ಷ ವೆಂಕಟೇಶ ಆಚಾರ್ ಸಾಲಿಗ್ರಾಮ, ಕಾರ್ಯದರ್ಶಿ ನಿತ್ಯಾನಂದ ಆಚಾರ್ ಕೋಟ, ಕೋಶಾಧಿಕಾರಿ ರಾಘವೇಂದ್ರ ಆಚಾರ್ ಚೇಂಪಿ, ವಿಶ್ವಜ್ಯೋತಿ ಬಳಗದ ಅಧ್ಯಕ್ಷೆ ಸವಿತಾ ಚಂದ್ರಶೇಖರ್ ಆಚಾರ್, ಕಾರ್ಯದರ್ಶಿ ವಾಣಿ ಸುರೇಶ್ ಆಚಾರ್, ಕೋಶಾಧಿಕಾರಿ ಸುಶೀಲ ಸತೀಶ್ ಆಚಾರ್ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!