Sunday, January 19, 2025
Sunday, January 19, 2025

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

Date:

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ನಡೆಯಿತು. ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ. ಎಸ್. ಕಾರಂತ ಮಾತನಾಡಿ, ಸಮಾಜದ ಓರೆಕೋರೆಗಳನ್ನು ತಿದ್ದಲು ಸಂಘಸಂಸ್ಥೆಗಳ ಪಾತ್ರ ಗಣನೀಯವಾದದ್ದು ಈ ನಿಟ್ಟಿನಲ್ಲಿ ವಿಪ್ರ ವಲಯ ಸಾಲಿಗ್ರಾಮ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿಯಾಗಿದೆ ಎಂದರು. ಇದೇ ವೇಳೆ ರಂಗಕಲಾವಿದೆ ಸುಧಾ ಮಣೂರು ಇವರಿಗೆ ಸನ್ಮಾನಿಸಲಾಯಿತು. ರಾಜ್ಯ ಜಾನಪದ ಪ್ರಪಂಚ ಪ್ರಶಸ್ತಿ 2024 ಪುರಸ್ಕೃತೆ ಜಾಹ್ನವಿ ಹೇರ್ಳೆ ಇವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಧಾರ್ಮಿಕ ಸಂಘಟನೆಯಾದ ಶ್ರೀ ಮಹಾವಿಷ್ಣು ಭಜನಾ ಸಂಘ ಪಾರಂಪಳ್ಳಿ ಇವರನ್ನು ಗುರುತಿಸಿ ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ ಅಧ್ಯಕ್ಷೆ ವನಿತಾ ಉಪಾಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಕೆ.ಅನಂತ ಪದ್ಮನಾಭ ಐತಾಳ್, ಬ್ರಹ್ಮಾವರ ತಾಲೂಕು ಮಹಿಳಾ ವಲಯದ ಅಧ್ಯಕ್ಷೆ ಮಂಜುಳ ಅಡಿಗ ಉಪಸ್ಥಿತರಿದ್ದರು. ಸುಜಾತ ಬಾಯರಿ ವರದಿ ವಾಚಿಸಿದರು. ಸನ್ಮಾನ ಪತ್ರವನ್ನು ಡಾ.ಸವಿತಾ ಉಪಾಧ್ಯಾಯ, ಶುಭ ಅಡಿಗ ವಾಚಿಸಿದರು. ಸ್ಮಿತಾ ರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಪ್ರಿತಾ ಪುರಾಣಿಕ ನಿರೂಪಿಸಿದರು. ಶಿವ ಪ್ರಭಾ ಅಲ್ಸೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!