ಉಡುಪಿ, ಸೆ.17: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಮ್ಎಮ್ ಹಾಗೂ ವಿಕೆಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಾತಾ ಹಾಸ್ಪಿಟಲ್ ನ ಸೈಕಲಾಜಿಸ್ಟ್ ಜಾಹ್ನವಿ ಪ್ರಕಾಶ್ ರವರು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಅವರ ವರ್ತನೆ, ಸಮಸ್ಯೆಗಳು ಹಾಗೂ ಪರಿಹಾರ ಮಾರ್ಗಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಶಿಕ್ಷಕ ವಿದ್ಯಾರ್ಥಿನಿಯರಾದ ಶೈಲಜಾ, ರಜನಿ, ಭಾರತಿ ಹಾಗೂ ಜಯಶೀಲಾ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರ ತರಬೇತಿ ಕಾರ್ಯಾಗಾರ

ಶಿಕ್ಷಕರ ತರಬೇತಿ ಕಾರ್ಯಾಗಾರ
Date: