Monday, February 24, 2025
Monday, February 24, 2025

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

Date:

ಉಡುಪಿ, ಸೆ.17: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2024 ಸ್ವೀಕರಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕಿಂತಲೂ ಅಧಿಕ ಕುಟುಂಬಗಳು ಸಹಕಾರ ನೀಡಿದೆ. ಅವರ ಶ್ರಮ ಜೀವನ ಎಲ್ಲರಿಗೂ ಮಾದರಿ ಎಂದು ಹೇಳಿದರು.

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅಧ್ಯಕ್ಷತೆ ವಹಿಸಿ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು. ರಾಯಣ್ಣ ಪ್ರತಿಮೆಗೆ ಕ್ಷೀರಾಭಿಷೇಕ ಮತ್ತು ಪುಷ್ಪಾಚ೯ನೆ ಮೂಲಕ ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ರಾಯಣ್ಣರಂತಹ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುತ್ತಿರುವುದು ಅಭಿನಂದನೀಯ. ಕನ್ನಡ ನಾಡು ನುಡಿ, ಸಂಸ್ಕ್ರತಿಗೆ ನಾವೆಲ್ಲರೂ ಸೇವೆ ಸಲ್ಲಿಸಬೇಕಾಗಿದೆ. ಕಸಾಪ ಉಡುಪಿ ಘಟಕವು ತನ್ನ ವಿನೂತನ ಅಭಿಯಾನಗಳ ಮೂಲಕ ವಿಶಿಷ್ಠ ಸೇವೆ ಸಲ್ಲಿಸುತ್ತಿದ್ದು, ಎಲ್ಲರಿಗೂ ಮಾದರಿಯಾಗಿದೆ ಎಂದರು.

ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ರಾಯಣ್ಣ ಅತ್ಯಂತ ಸಣ್ಣ ವಯಸ್ಸಿನಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಆದರ್ಶಗಳು ನಮ್ಮ ಬದುಕಿನಲ್ಲಿ ರೂಡಿಸಿಕೊಳ್ಳಬೇಕಾಗಿದೆ. ಹಿಂದೂ ಸಂಸ್ಕ್ರತಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜೀವನ ರೂಡಿಸಬೇಕು ಎಂದರು.
ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಸ್ಥಾಪಕರಾದ ವಿಶ್ವನಾಥ ಶೆಣೈ ಪುರಸ್ಕಾರ ಪ್ರದಾನ ಮಾಡಿದರು.
ವೇದಿಕೆಯಲ್ಲಿ ಕನ್ನಡ ಪರ ಹೋರಾಟಗಾರ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಆಶಯ ಭಾಷಣ ಮಾಡಿದರು. ಕಸಾಪ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು. ವಿ. ಉಮಾಶಂಕರಿ ಪ್ರಾರ್ಥಿಸಿದರು. ಸಂ.ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಅಭಿಮಾನಿ ಬಳಗದ ಲಕ್ಷ್ಮಣ ಕೋಲ್ಕಾರ್ ವಂದಿಸಿದರು. ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!