Sunday, January 19, 2025
Sunday, January 19, 2025

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಉದ್ಘಾಟನೆ

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಉದ್ಘಾಟನೆ

Date:

ಉಡುಪಿ, ಸೆ.17: ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದಲ್ಲಿ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ನಮ್ಮ ಸುತ್ತ ಪರಿಸರ ಸ್ವಚ್ಛವಾಗಿದ್ದಾಗ ನಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ತಮ್ಮ ತಮ್ಮ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಂಡಾಗ ಇಡೀ ನಗರ ಸ್ವಚ್ಛವಾಗುತ್ತದೆ. ಈ ಮೂಲಕ ಇಡೀ ಜಿಲ್ಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ವಿದ್ಯಾರ್ಥಿಗಳು ತಾವು ಬಳಸುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ತಮ್ಮ ಮನೆ, ಶಾಲೆಯ ಸುತ್ತ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತೆ ಎನ್ನುವುದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಿರದೇ ದಿನನಿತ್ಯ ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ ಕೆ.ಎಸ್ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವದ ಪ್ರಮಾಣ ವಚನವನ್ನು ಭೋಧಿಸಿದರು. ಬಳಿಕ ವಿದ್ಯಾರ್ಥಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳು, ನಗರಸಭೆಯ ಸದಸ್ಯರು, ಭಜನಾ ಮಂದಿರದ ಪ್ರಮುಖರು ಶ್ರಮದಾನ ಮಾಡಿ ಸುತ್ತಮುತ್ತ ಪರಿಸರವನ್ನು ಸ್ವಚ್ಛಗೊಳಿಸಿದರು.

ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಉದಯ ಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನರಾಜು, ಪೌರಾಯುಕ್ತ ರಾಯಪ್ಪ, ನಗರ ಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮಲ್ಪೆ ಅಭಿವೃದ್ಧಿ ಸಮಿತಿಯ ಸಂತೋಷ್ ಪೈ, ಹನುಮಾನ್ ವಿಠೋಭ ಭಜನಾ ಮಂದಿರದ ಅಧ್ಯಕ್ಷ ಸತೀಶ್ ಬಂಗೇರ, ಜ್ಞಾನ ಜ್ಯೋತಿ ಭಜನಾ ಮಂದಿರದ ಅಧ್ಯಕ್ಷ ಪಾಂಡುರಂಗ ಮಲ್ಪೆ, ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ಧನಂಜಯ, ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ಲಕ್ಷ್ಮಿ ಮಂಜುನಾಥ, ಸ್ವಚ್ಛತಾ ರಾಯಭಾರಿ ಜೋಸೆಫ್ ರುಬೆಲ್ಲೋ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಮನೋಹರ, ಹರೀಶ್ ಬಿಲ್ಲವ, ನಗರಸಭೆಯ ಸೂಪರ್ ವೈಸರ್‌ಗಳು, ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!