Tuesday, February 25, 2025
Tuesday, February 25, 2025

ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ‘ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ’

ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ‘ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ’

Date:

ಕೋಟ, ಸೆ.18: ಶ್ರೀ ವಿನಾಯಕ ಯುವಕ ಮಂಡಲ(ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ಕೊಡಮಾಡುವ 2024ನೇ ಸಾಲಿನ ಶ್ರೀವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಕರಾವಳಿ ಪರಿಸರದಲ್ಲಿ ಕಳೆದ ಮೂವತೈದು ವರುಷಗಳಿಂದ ಸಮಾಜ ಸೇವೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡು. ಸಾವಿರಾರು ಅಶಕ್ತ ಕುಟುಂಬಗಳಿಗೆ ಆಸರೆಯಾಗಿ ಹೊಸ ಬದುಕನ್ನು ನೀಡಿ ಆಪತ್ಬಾಂಧವ ಎಂದು ಖ್ಯಾತಿ ಪಡೆದಿರುವ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು 2024ನೇ ಸಾಲಿನಲ್ಲಿ ಆಯ್ಕೆ ಮಾಡಲಾಗಿದೆ. ಪುರಸ್ಕಾರ ಪ್ರದಾನ ಕಾರ್ಯಕ್ರಮ ಆಕ್ಟೋಬರ್ 9 ರ ಸಂಜೆ 7.30ಕ್ಕೆ ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಯ್ಬ್ರಕಟ್ಟೆಯಲ್ಲಿ ನಡೆಯುವ ಶ್ರೀ ಸಾರ್ವಜನಿಕ ಶಾರದೋತ್ಸವದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಅಧ್ಯಕ್ಷ ಅಮೃತ್ ಪೂಜಾರಿ, ಕಾರ್ಯದರ್ಶಿ ಗಿರೀಶ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...
error: Content is protected !!