Friday, September 20, 2024
Friday, September 20, 2024

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

Date:

ಉಡುಪಿ, ಸೆ.18: ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಯನ್ನು ಸಂಘಟಿಸಿದ್ದು, ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಈ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧೆಗಳ ವಿವರ: ಸೆಪ್ಟಂಬರ್ 21 ರಂದು ಬೆಳಗ್ಗೆ 9 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಬಾಸ್ಕೆಟ್ ಬಾಲ್ ಹಾಗೂ ಸಂತ ಸಿಸಿಲಿ ಪ್ರೌಢಶಾಲೆಯಲ್ಲಿ ಹ್ಯಾಂಡ್ ಬಾಲ್ ಮತ್ತು ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟ, ಸೆಪ್ಟಂಬರ್ 22 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡುವಿನ ಒಳಾಂಗಣ ಕ್ರೀಡಾಂಗಣದಲ್ಲಿ ಟಿ.ಟಿ ಹಾಗೂ ಶಟ್ಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ, ಸೆಪ್ಟಂಬರ್ 23 ರಂದು ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಎಂಜೆಸಿ ಯಲ್ಲಿ ಫುಟ್‌ಬಾಲ್ ಕ್ರೀಡಾಕೂಟ ಹಾಗೂ 3 ಗಂಟೆಗೆ ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖೋ-ಖೋ ಮತ್ತು ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಸೆಪ್ಟಂಬರ್ 24 ರಂದು ಕಬ್ಬಡಿ ಹಾಗೂ ವಾಲಿಬಾಲ್ ಕ್ರೀಡಾಕೂಟ ಹಾಗೂ ಸೆಪ್ಟಂಬರ್ 25 ರಂದು ಅಥ್ಲೆಟಿಕ್ಸ್, ತ್ರೋಬಾಲ್, ಕುಸ್ತಿ ಹಾಗೂ ಯೋಗ ಕ್ರೀಡಾಕೂಟವು ನಡೆಯಲಿದೆ.

ಈಜು, ನೆಟ್‌ಬಾಲ್ ಮತ್ತು ಟೆನ್ನಿಸ್ ಕ್ರೀಡೆಯ ವಿಭಾಗ ಮಟ್ಟದ ಆಯ್ಕೆಯನ್ನು ಸೆಪ್ಟಂಬರ್ 25 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!