ಶಿರ್ವ, ಸೆ.18: ಪಿಲಾರುಖಾನ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವಾರ್ಷಿಕ ಮಹಾಸಭೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸುಶೀಲಾ ನಾಡ, ಕಾಪು ವಲಯ ಕೊರಗ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶೇಖರ ಕೊಗರ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕಾರ್ಯದರ್ಶಿಗಳಾದ ಶೀಲಾ ಬಂಟ್ವಾಳ, ಕೋಶಾಧಿಕಾರಿಗಳಾದ ವಿನಾಯ ಅಡ್ವೆ, ಕೊರಗ ಮುಖಂಡರಾದ ಮತ್ತಾಡಿ, ಬೊಗ್ರ ಕೊರಗ ಉಪಸ್ಥಿತರಿದ್ದರು.
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ: ವಾರ್ಷಿಕ ಮಹಾಸಭೆ

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ: ವಾರ್ಷಿಕ ಮಹಾಸಭೆ
Date: