Tuesday, September 29, 2026
Tuesday, September 29, 2026

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

Date:

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ ಭವನದಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಇವರು ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ ಬೆಳ್ಳಿಯ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ)ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್(ರಿ) ಈ ಸಂಸ್ಥೆಯ ಸದಸ್ಯರಾಗಿದ್ದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿನಿ. ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿ ಇವರು ತರಬೇತಿ ನೀಡಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!