Wednesday, July 29, 2026
Wednesday, July 29, 2026

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

Date:

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟ್ರೀಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಯಾದ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಯುವ ರೆಡ್‌ಕ್ರಾಸ್ ಘಟಕ ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಹ ಸಂಯೋಜಕಿಯಾದ ಮಾಲತಿ ವಂದಿಸಿದರು. ವಿದ್ಯಾರ್ಥಿನಿ ದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಹಾಸ್ ಜೆ.ಜಿ. ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!