Sunday, February 23, 2025
Sunday, February 23, 2025

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ: ಯಶ್‌ಪಾಲ್ ಎ ಸುವರ್ಣ

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ: ಯಶ್‌ಪಾಲ್ ಎ ಸುವರ್ಣ

Date:

ಉಡುಪಿ, ಸೆ.20: ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ 05-10-2024ನೇ ಶನಿವಾರ ಮಧ್ಯಾಹ್ನ 2.00ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ನಾಡ ಹಬ್ಬ ದಸರಾವನ್ನು ಆಯ್ಕೆ ಮಾಡಿದ್ದು, ಸ್ಪರ್ಧಿಗಳು ಈ ವಿಷಯಕ್ಕೆ ಸಂಬಂಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ (1 ರಿಂದ 4ನೇ ತರಗತಿ), ಪ್ರಾಥಮಿಕ ವಿಭಾಗ (5 ರಿಂದ 7 ನೇ ತರಗತಿ), ಹೈಸ್ಕೂಲ್ ವಿಭಾಗ (8 ರಿಂದ 10ನೇ ತರಗತಿ), ಕಾಲೇಜು ವಿಭಾಗ (ಪದವಿಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ 3 ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿಗಾಗಿ
ಹಾಗೂ ಸ್ಫರ್ಧೆಯ ವಿವರಗಳು ಮಹಾಲಕ್ಷ್ಮಿ ಬ್ಯಾಂಕಿನ ವೆಬ್‌ಸೈಟ್ http://www.mahalakshmicoopbank.com ನಲ್ಲಿ ಲಭ್ಯವಿದ್ದು ಆನ್‌ಲೈನ್ ಮೂಲಕ ನೋದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ 9972120332, 9845016830 ಸಂಪರ್ಕಿಸಬಹುದು. ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!