Monday, December 23, 2024
Monday, December 23, 2024

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

Date:

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎಚ್ಚರ ವಹಿಸಬೇಕು. ಸೋಂಕು ಇರುವ ಆಹಾರ ಅಥವಾ ಕಲುಷಿತ ನೀರಿನ ಸೇವನೆಯಿಂದ ಕಾಲರಾ ಬ್ಯಾಕ್ಟಿರೀಯಾ ದೇಹ ಪ್ರವೇಶಿಸುತ್ತದೆ. ಮನೆಗೆ ತರುವ ಎಲ್ಲಾ ರೀತಿಯ ತರಕಾರಿ ಹಣ್ಣು ಹಾಗೂ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ನೀರಿನಿಂದ ತೊಳೆದು ಸ್ವಚ್ಛಗೊಳಿಸಿ ಬಳಸಬೇಕು. ಕಾಲರಾ ಬಗ್ಗೆ ಮುಂಜಾಗೃತೆ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರು ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು. ಹೊಟೇಲ್, ರೆಸ್ಟೋರೆಂಟ್‌ಗಳಲ್ಲಿ ಕುಡಿಯಲು ಬಿಸಿ ನೀರನ್ನೇ ನೀಡಬೇಕು. ಹೊಟೆಲ್‌ಗಳಲ್ಲಿ ಬಳಸುವ ಲೋಟ, ತಟ್ಟೆ ಹಾಗೂ ಪಾತ್ರೆಗಳನ್ನೂ ಬಿಸಿ ನೀರಿನಲ್ಲಿ ತೊಳೆಯಬೇಕು. ಯಾವುದೇ ಸಮುದ್ರದ ಉತ್ಪನ್ನಗಳನ್ನು ಮುಟ್ಟಿದಾಗ ಸರಿಯಾಗಿ ಕೈತೊಳೆದು ನಂತರ ಆಹಾರ ಸೇವಿಸಬೇಕು. ಸಾರ್ವಜನಿಕರು ರಸ್ತೆ ಬದಿಯಲ್ಲಿ ಮಾರಾಟ ಮಾಡುವ ತಿನಿಸು, ತಳ್ಳುಗಾಡಿಯಲ್ಲಿ ಮಾರಾಟ ಮಾಡುವ ಆಹಾರ ಹಾಗೂ ಹಣ್ಣುಗಳನ್ನು ಸೇವಿಸಬಾರದು. ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳು ಕೈಗಳನ್ನು ಸ್ವಚ್ಛವಾಗಿ ತೊಳೆದು ಆಹಾರ ಉತ್ಪನ್ನ ಬಳಸುವ ಬಗ್ಗೆ ಅರಿವು ಮೂಡಿಸಬೇಕು.

ಸಾರ್ವಜನಿಕರು ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಬಸ್ ನಿಲ್ದಾಣ, ರೈಲು ನಿಲ್ದಾಣ, ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯವನ್ನು ಕಾಪಾಡಬೇಕು. ಕಾಲರಾ ಗಂಭೀರ ಸಾಂಕ್ರಾಮಿಕ ಕಾಯಿಲೆಯಾಗಿದೆ. ವಾಕರಿಕೆ, ಹಠಾತ್ ಅತಿಸಾರ, ಸೌಮ್ಯದಿಂದ ತೀವ್ರ ನಿರ್ಜಲೀಕರಣ, ವಾಂತಿ, ಆಯಾಸ, ಒಣ ಬಾಯಿ, ದಣಿವು, ತೀವ್ರ ಬಾಯಾರಿಕೆ ಇದು ಕಾಲರಾ ರೋಗದ ಲಕ್ಷಣವಾಗಿದೆ. ಮಕ್ಕಳಲ್ಲಿ ತೀವ್ರ ನಿದ್ರಾಹೀನತೆ, ಜ್ವರ, ಸೆಳೆತದಂತಹ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲೇ ಮಣ್ಣಿನ ರಾಶಿ; ನಿರ್ಲಕ್ಷ್ಯದ ಪರಮಾವಧಿಗೆ ಇದೇ ಸಾಕ್ಷಿ

ಉಡುಪಿ, ಡಿ.23: (ಉಡುಪಿ ಬುಲೆಟಿನ್ ವಿಶೇಷ ವರದಿ) ಸುಗಮ ಸಂಚಾರಕ್ಕೆ ಜಾಗ...

ಉಡುಪಿ: ಡಿ.24 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಡಿ.24: ದುರಸ್ಥಿ ಕಾರ್ಯದ ಪ್ರಯುಕ್ತ ಮೆಸ್ಕಾಂ ವತಿಯಿಂದ ಹಿರಿಯಡ್ಕ ಸಬ್‌ಸ್ಟೇಶನ್‌ನಲ್ಲಿ...

ಉಡುಪಿ: ಕಟ್ಟಡಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರ ವಿರುದ್ಧ ಶಿಸ್ತು ಕ್ರಮ

ಉಡುಪಿ, ಡಿ.21: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ಚರಂಡಿಗಳಿಗೆ...

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಯಕ್ಷಗಾನ ಪ್ರಸಂಗಕೃತಿ ಅನಾವರಣ

ಉಡುಪಿ, ಡಿ.23: ಯಕ್ಷಗಾನ ಪ್ರಸಂಗ ಸಾಹಿತ್ಯಕ್ಕೆ ಸುಮಾರು ಏಳುನೂರು ವರ್ಷಗಳ ಇತಿಹಾಸವಿದೆ....
error: Content is protected !!