Tuesday, February 25, 2025
Tuesday, February 25, 2025

ಕಿರು ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕಿರು ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಸೆ.21: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರವು ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ಮತ್ತು ವ್ಯಾಪಾರ ಪುನರ್‌ಸ್ಥಾಪಿಸುವ ಸಲುವಾಗಿ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಕಿರು ಸಾಲ ಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಉಡುಪಿ ನಗರಸಭಾ ಪ್ರದೇಶದಲ್ಲಿ ಬೀದಿ ವ್ಯಾಪಾರಿಗಳಾಗಿ ತೊಡಗಿಸಿಕೊಂಡು ಗುರುತಿಸಲ್ಪಟ್ಟ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಯು ಪ್ರಥಮ ಹಂತದಲ್ಲಿ ರೂ. 10,000, 2ನೇ ಹಂತದಲ್ಲಿ ರೂ. 20,000 ಮತ್ತು 3ನೇ ಹಂತದಲ್ಲಿ ರೂ. 50,000 ರ ವರೆಗಿನ ಸಾಲ ಸೌಲಭ್ಯಗಳನ್ನು ಮೇಲಾಧರ ಮುಕ್ತ ಬಂಡವಾಳ ಸಾಲ ಶೇ. 7ರ ಬಡ್ಡಿಯಲ್ಲಿ ಪಡೆಯಲು ಅರ್ಹರಾಗಿರುತ್ತಾರೆ. ಒಂದು ವರ್ಷದ ಅವಧಿಯವರೆಗೆ ಪ್ರತೀ ಕಂತನ್ನು ಪ್ರತೀ ಮಾಹೆಯಾನ ಮರು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ವಾಣಿಜ್ಯ ಬ್ಯಾಂಕ್‌ಗಳು ಈ ಯೋಜನೆಯಡಿ ಸಾಲ ನೀಡಲಿವೆ. ಅಲ್ಲದೇ ಬೀದಿ ಬದಿ ವ್ಯಾಪಾರಿಗಳಿಗೆ ಡಿಜಿಟಲ್ ವಹಿವಾಟು ಕೈಗೊಳ್ಳಲು ಮಾಸಿಕ ಕ್ಯಾಶ್ ಬ್ಯಾಕ್ ಪಡೆಯಲು ಈ ಯೋಜನೆ ಉತ್ತೇಜಿಸಲಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ಮತ್ತು ಸಣ್ಣಪುಟ್ಟ ಎಲ್ಲಾ ವ್ಯಾಪಾರಿಗಳು ಈ ಕುರಿತು ನಗರಸಭಾ ಕಛೇರಿಯ ಸಮುದಾಯ ಸಂಘಟನಾಧಿಕಾರಿ ಕಚೇರಿಯಲ್ಲಿ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿ/ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448723833, 9901481729 ಅನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!