Tuesday, February 25, 2025
Tuesday, February 25, 2025

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

Date:

ಉಡುಪಿ, ಸೆ.21: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸಿ, ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷö್ಮ (ತುಂತುರು/ ಹನಿ) ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!