Tuesday, February 25, 2025
Tuesday, February 25, 2025

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

Date:

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಯುವ ರೆಡ್ ಕ್ರಾಸ್ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ವಿಶ್ವ ಶಾಂತಿ ದಿನದ ಅಂಗವಾಗಿ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾವು ಇಂದು ಸಂತೆಕಟ್ಟೆ ಬಸ್‌ ನಿಲ್ದಾಣದಿಂದ ಹೊರಟು ಅಂಬಾಗಿಲು ಮೂಲಕ ಅಮೃತ್ ಗಾರ್ಡನ್‌ನಲ್ಲಿ ಸಮಾಪನಗೊಂಡಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ರೆಡ್‌ಕ್ರಾಸ್ ಗೌರವ ಖಚಾಂಚಿ ರಮಾದೇವಿ, ರೆಡ್ ಕ್ರಾಸ್ ಪದಾಧಿಕಾರಿಗಳಾದ ಟಿ. ಚಂದ್ರಶೇಖರ್, ಬಾಲಕೃಷ್ಣ ಶೆಟ್ಟಿ ಕೆ., ಲಯನ್ ವಲಯಾಧ್ಯಕ್ಷ ಅನಂತ ಶೆಟ್ಟಿ, ಖಚಾಂಚಿ ರೇಖಾ ಶೆಟ್ಟಿ, ರೆಡ್‌ಕ್ರಾಸ್ ಸದಸ್ಯ ರಾಘವೇಂದ್ರ ಪ್ರಭು ಕರ್ವಾಲ್, ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!