ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ವತಿಯಿಂದ ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಇಲ್ಲಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವಂತೆ ಸುಮಾರು 13 ಸಾವಿರ ರೂ ಮೊತ್ತದ ಪುಸ್ತಕಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ರವರಿಗೆ ಹಸ್ತಾಂತರಿಸಲಾಯಿತು. ಖ್ಯಾತ ಸಾಹಿತಿ ಕು.ಗೋ ರವರು ಪುಸ್ತಕಗಳನ್ನು ನೀಡಿದ್ದರು. ಕಸಾಪ ಉಡುಪಿ ತಾ.ಅಧ್ಯಕ್ಷ ರವಿರಾಜ್ ಹೆಚ್.ಪಿ ಪುಸ್ತಕಗಳನ್ನು ಹತ್ತಾಂತರಿಸಿದರು. ಉಪನ್ಯಾಸಕಿ, ಸಾಹಿತಿ ಸುಧಾ ಅಡುಕಳ, ತಾಲೂಕು ಗೌ.ಕಾರ್ಯದರ್ಶಿ ರಂಜಿನಿ ವಸಂತ್, ಮನೆಯೇ ಗ್ರಂಥಾಲಯ ಅಭಿಯಾನ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಸಾಮಾಜಿಕ ಜಾಲತಾಣ ಪ್ರಮುಖ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್ ಉಪಸ್ಥಿತರಿದ್ದರು.
ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ
Date: