Sunday, September 22, 2024
Sunday, September 22, 2024

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

Date:

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ ರೈತರೆಡೆಗೆ ಕಾರ್ಯಕ್ರಮ ಪ್ರಶಂಸನಾರ್ಹ ಕಾರ್ಯವಾಗಿದೆ ಎಂದು ಕೋಟದ ಹಾಡಿಕೆರೆ ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ಧರ್ಮದರ್ಶಿ ಭಾಸ್ಕರ್ ಸ್ವಾಮಿ ಅಭಿಪ್ರಾಯಪಟ್ಟರು. ಭಾನುವಾರ ಕೋಟದ ಹಾಡಿಕೆರೆಬೆಟ್ಟು ಇಲ್ಲಿ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 39ನೇ ಮಾಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮನೆ ಮನೆಗೆ ತೆರಳಿ ರೈತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಜಿಲ್ಲೆಯ ಎಲ್ಲಾ ಭಾಗಗಳ ಸಂಘಸಂಸ್ಥೆಗಳಿಂದಾಗಲಿ, ಆಗ ಮಾತ್ರ ಜನರು ಕೃಷಿ ಕಾಯಕದ ಕಡೆ ಹೆಚ್ಚು ಆಕರ್ಷಿತರಾಗುತ್ತಾರೆ. ಪ್ರಸ್ತುತ ಯುವ ಸಮೂಹ ಕೃಷಿ ಕಾರ್ಯದತ್ತ ಮುನ್ನಗ್ಗಬೇಕಿದೆ. ಹಾಡಿಕೆರೆ ಚಂದ್ರ ನಾಯ್ಕ್ ರಂತೆ ಪ್ರತಿಯೊಬ್ಬರು ಕೃಷಿ ಕ್ಷೇತ್ರದಲ್ಲಿ ಸಾಧಕರಾಗಲು ಸಾಧ್ಯವಿದೆ ಎಂದರು. ಕಾರ್ಯಕ್ರಮದ ಮೊದಲು ಗೋ ಪೂಜೆ ನಡೆಯಿತು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ, ಉದ್ಯಮಿ ಹರೀಶ್ ದೇವಾಡಿಗ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಸದಸ್ಯ ಶೇಖರ್ ಕಾರ್ಕಡ, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಮಂಜುನಾಥ್ ಉಪಾಧ್ಯ, ಪಂಚವರ್ಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಕೋಟ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಸ್ಕಾರ ಪತ್ರವನ್ನು ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ವಾಚಿಸಿದರು. ಶಿಕ್ಷಕ ಸಂತೋಷ್ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...
error: Content is protected !!