ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್ 29 ರಂದು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕರಾವಳಿಯ ಸಾಹಿತಿಗಳು-ಕಲಾವಿದರು ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನದ ಪೂರ್ವಭಾವಿಯಾಗಿ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ್ ಕೊಡವೂರು, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆ ಹಾಗೂ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್ ಪಡುಕೆರೆ, ಸುರೇಖಾ ಶೈಲೇಶ್ ಮುಂತಾದವರು ಉಪಸ್ಥಿತರಿದ್ದರು.