ಕೋಟ, ಸೆ.23: ಇಲ್ಲಿನ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಳ್ಳಲಿರುವ ಹಿನ್ನಲ್ಲೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ದೇಗುಲದಲ್ಲಿ ನಡೆಯಿತು. ದೇಗುಲದ ಆಡಳಿತ ಮಂಡಳಿಯ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಶ್ರೀ ದೇಗುಲದಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ದೇವಸ್ಥಾನದ ಆಡಳಿತ ವ್ಯವಸ್ಥಾಪಕ ಗಣೇಶ್ ಹೊಳ್ಳ, ಗ್ರಾಮದ ಹಿರಿಯರಾದ ಒಳಮಾಡು ಸೋಮ ಮರಕಾಲ, ಕೋಟ ಠಾಣೆಯ ಎಎಸ್‌ಐ ಜಯಪ್ರಕಾಶ್, ಸ್ಥಳೀಯರಾದ ಭದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಶರನ್ನವರಾತ್ರಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಶರನ್ನವರಾತ್ರಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
Date: