Sunday, January 19, 2025
Sunday, January 19, 2025

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ‘ಸ್ವಚ್ಛತಾ ಹೀ ಸೇವಾ’

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ‘ಸ್ವಚ್ಛತಾ ಹೀ ಸೇವಾ’

Date:

ಉಡುಪಿ, ಸೆ.24: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ‘ಸ್ವಭಾವ ಸ್ವಚ್ಚತಾ-ಸಂಸ್ಕಾರ ಸ್ವಚ್ಛತಾ’ ಎಂಬ ಧ್ಯೇಯವಾಕ್ಯದೊಂದಿಗೆ ಸೆಪ್ಟಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ “ಸ್ವಚ್ಛತಾ ಹೀ ಸೇವಾ-2024” ಪಾಕ್ಷಿಕ ಆಚರಣೆಯನ್ನು ಆಯೋಜಿಸಲಾಗುತ್ತಿದ್ದು, ಸದರಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಕಿ ಭಾಗಿದಾರಿ, ಸಂಪೂರ್ಣ ಸ್ವಚ್ಛತಾ ಚಟುವಟಿಕೆಗಳು ಹಾಗೂ ಸಫಾಯಿ ಮಿತ್ರ ಸುರಕ್ಷಾ ಶಿವಿರಾ ಎಂಬ 03 ವಿಷಯಗಳನ್ನು ಕೇಂದ್ರೀಕರಿಸಿ ಆಚರಣೆ ಮಾಡಲಾಗುತ್ತಿದೆ. ಈ ಸಂಬಂಧ ಸೆಪ್ಟಂಬರ್ 27 ರಂದು ಪ್ರವಾಸೋದ್ಯಮ ಮತ್ತು ಶಾಂತಿ ಸಂದೇಶದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಹೋಮ್ ಸ್ಟೇ, ರೆಸಾರ್ಟ್ ಅಥವಾ ಯಾವುದೇ ಪ್ರವಾಸೋದ್ಯಮ ಚಟುವಟಿಕೆ ನಡೆಸುವವರು ಮತ್ತು ತಮ್ಮ ಸುತ್ತಮುತ್ತಲಿನ ವ್ಯಾಪ್ತಿ, ಪ್ರವಾಸಿ ತಾಣ, ಕಡಲತೀರ ಮತ್ತು ಇತರೆ ಸ್ಥಳಗಳಲ್ಲಿ ಅಕ್ಟೋಬರ್ 2 ರ ಒಳಗೆ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಿ, ಸ್ವಚ್ಛತೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಛಾಯಾಚಿತ್ರ ಹಾಗೂ ವಿಡೀಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಪ್ರಚಾರ ಪಡಿಸುವುದು ಮತ್ತು ಇದರ ಕುರಿತಾಗಿ ಪ್ರವಾಸೋದ್ಯಮ ಇಲಾಖಾ ಕಛೇರಿಗೆ ವರದಿ ಸಲ್ಲಿಸಲು ಅಥವಾ ಪ್ರವಾಸೋದ್ಯಮ ಇಲಾಖೆಯ ಸಾಮಾಜಿಕ ಜಾಲತಾಣಗಳಲ್ಲಿ (INSTAGRAM ID- Udupi_tourism_department) ಟ್ಯಾಗ್ ಮಾಡಬಹುದಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡವರು ಹಾಗೂ ಸದಸ್ಯರು ಭಾಗವಹಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ: 0820- 2574868 ಅಥವಾ ಇ-ಮೇಲ್ [email protected] ಅನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!