Monday, February 24, 2025
Monday, February 24, 2025

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಜತ ಮಹೋತ್ಸವ ಸಭಾಂಗಣ ಉದ್ಘಾಟನೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಜತ ಮಹೋತ್ಸವ ಸಭಾಂಗಣ ಉದ್ಘಾಟನೆ

Date:

ಬೆಳ್ಮಣ್, ಸೆ.25: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ವರ್ಷದ ಸವಿನೆನಪಿಗಾಗಿ ‘ರಜತ ಮಹೋತ್ಸವ ಸಭಾಂಗಣ’ ಉದ್ಘಾಟನೆಗೊಂಡಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷರು ಹಾಗೂ ರಜತ ಮಹೋತ್ಸವ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಅವರು ರಜತ ಮಹೋತ್ಸವ ಸಭಾಂಗಣವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಕಾರ್ಕಳ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್‌ನ ಮಾಲಕರಾದ ಸುಧೀರ್ ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಕುಂಟಲಗುಂಡಿ ಸುನಿಲ್ ಪೂಜಾರಿ, ಗೀತಾ ಶೆಟ್ಟಿ ಕುಂಟಲಗುಂಡಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕಾಸರಬೈಲು ಸುರೇಶ್ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ನಿಕಟಪೂರ್ವಾಧ್ಯಕ್ಷ ಪ್ರಶಾಂತ್ ಪೂಜಾರಿ, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!