Sunday, January 19, 2025
Sunday, January 19, 2025

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

Date:

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಬುಧವಾರ ಸರ್ಕಾರಿ ಪದವಿಪೂರ್ವ ಕಾಲೇಜಿನ(ಬೋರ್ಡ್ ಹೈ ಸ್ಕೂಲ್)ನಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು. ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆಯು ಸಹಕಾರಿಯಾಗಿದ್ದು, ಸರಕಾರ ರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ರೂಪಾಯಿ 1500 ಕೋಟಿ ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ ಕೆ. ಕ್ಷೇತ್ರ ಶಿಕ್ಷಣಾಧಿಕಾರಿ ಡಾಕ್ಟರ್ ಎಲ್ಲಮ್ಮ, ಪಿಎಂ ಪೋಶನ್ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ.ಅಶೋಕ ಕಾಮತ್, ಡಯಟ್‌ನ ಉಪನ್ಯಾಸಕ ಯೋಗನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕರು ವಿವೇಕ ಗಾಂವ್ಕರ್, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್, ಉಪ ಪ್ರಾಂಶುಪಾಲೆ ಭಾಗೀರಥಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!