Sunday, January 19, 2025
Sunday, January 19, 2025

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ‘ಸ್ವಭಾವ ಸ್ವಚ್ಚತಾ-ಸಂಸ್ಕಾರ ಸ್ವಚ್ಛತಾ’ ಎಂಬ ಧ್ಯೇಯವಾಕ್ಯದೊಂದಿಗೆ ಸೆಪ್ಟಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ‘ಸ್ವಚ್ಛತಾ ಹೀ ಸೇವಾ-2024’ ಪಾಕ್ಷಿಕ ಆಚರಣೆಯನ್ನು ಆಯೋಜಿಸಲಾಗುತ್ತಿದ್ದು, ಸದರಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಕಿ ಭಾಗಿದಾರಿ, ಸಂಪೂರ್ಣ ಸ್ವಚ್ಛತಾ ಚಟುವಟಿಕೆಗಳು ಹಾಗೂ ಸಫಾಯಿ ಮಿತ್ರ ಸುರಕ್ಷಾ ಶಿವಿರಾ ಎಂಬ 03 ವಿಷಯಗಳನ್ನು ಕೇಂದ್ರೀಕರಿಸಿ ಆಚರಣೆ ಮಾಡಲಾಗುತ್ತಿದೆ. ಈ ಸಂಬಂಧ ಸೆಪ್ಟಂಬರ್ 27 ರಂದು ‘ಪ್ರವಾಸೋದ್ಯಮ ಮತ್ತು ಶಾಂತಿ’ ಸಂದೇಶದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬೆಳಗ್ಗೆ 7.30 ಕ್ಕೆ ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!