Friday, September 27, 2024
Friday, September 27, 2024

‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ-2024ಕ್ಕೆ’ ಮೂವರು ಹಿರಿಯ ಸಾಹಿತಿಗಳ ಆಯ್ಕೆ

‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ-2024ಕ್ಕೆ’ ಮೂವರು ಹಿರಿಯ ಸಾಹಿತಿಗಳ ಆಯ್ಕೆ

Date:

ಉಡುಪಿ, ಸೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024ಕ್ಕೆ’ ರಾಜ್ಯದ ಮೂವರು ಹಿರಿಯ  ಸಾಹಿತಿಗಳು ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ ), ಚಿಕ್ಕಮಗಳೂರಿನ ಎಚ್. ಎಸ್. ಸತ್ಯನಾರಾಯಣ.( ವಿಮರ್ಶೆ), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನವೆಂಬರ್ ಒಂದರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರದಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಸಮಿತಿಯ ಸಂಚಾಲಕಿಯಾದ ಉಡುಪಿ ಸಂಧ್ಯಾ ಶೆಣೈ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ...

ಫಲಕ ಉದ್ಘಾಟನೆ

ಉಡುಪಿ, ಸೆ.27: ಆಮ್ ಕೇರ್ ಕ್ಲಿನಿಕ್, ರೋಟರಿ ಉಡುಪಿ ಮತ್ತು ಇನ್ನರ್...

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...
error: Content is protected !!